ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. ಇದು ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.