ಬೆಂಗಳೂರು: ಅತ್ತ ಮೈಸೂರು ಮತ್ತು ಮಂಡ್ಯ ಭಾಗಗಳಲ್ಲಿ ರೈತರು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿದ್ದರೆ ಇಲ್ಲಿ ಬೆಂಗಳೂರಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡುವುದಕ್ಕೆ ಸ್ನೇಹ ಬೆಳೆಸಲು ಕಸರತ್ತು ನಡೆಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಕೆಎಸ್ ಈಶ್ವರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ಜೆಪಿ ನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದರು. ಬಿಜೆಪಿ ನಾಯಕನೊಂದಿಗೆ ಸಾ ರಾ ಮಹೇಶ್ ಕೂಡ ಆಗಮಿಸಿದ್ದಾರೆ.