ಮಂಡ್ಯ : ಹೆಚ್.ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಅವರು ಬದುಕಿದ್ದು ಸತ್ತಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿ, ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು. ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್ ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಅಲ್ಲದೆ, ಸ್ಥಳೀಯರನ್ನು ಆಯ್ಕೆ ಮಂಡ್ಯ ಗೌಡಿಕೆಯನ್ನು ಬೇರೆಯವರಿಗೆ ಕೊಟ್ಟಿಲ್ಲ. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.