ಬೆಂಗಳೂರು : ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಸಚಿವ ಎನ್ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜ ಅಂತ ಹೇಳಿರಲಿಲ್ಲ. ಅದಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರ್ಕಾರವೇ ನಕಲಿ ದಾಖಲೆ ಸರ್ಕಾರ ಸೃಷ್ಟಿ ಮಾಡಿಕೊಂಡು ಆರೋಪ ಮಾಡುತ್ತಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.