ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಾಸನದ ಆಹಾರ ನಿರೀಕ್ಷಕರ ಜಗನ್ನಾಥ್ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಫ಼ುಡ್ ಇನ್ಸ್ಪೆಕ್ಟರ್ ಜಗನ್ನಾಥ್ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ತಿರುಮಲ್ಲೇಶ್, ಇನ್ಸ್ಪೆಕ್ಟರ್ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ಮಾಡಿದೆ.