ಮೈಸೂರು: ಅಭ್ಯರ್ಥಿ ಆಯ್ಕೆ ಗೊಂದಲದ ನಡುವೆ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದ್ದು, ಇಂದು ಮೈಸೂರಿನಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆ ಆಯೋಜನೆ ಮಾಡಿದೆ. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ಡಾ. ಅಶ್ವತ್ ನಾರಾಯಣ್ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸ್ಥಳೀಯ ಶಾಸಕರು, ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.