ಮೈಸೂರು: ಪ್ರತಾಪ್ ಸಿಂಹಗೆ ನಮ್ಮ ವಿರುದ್ಧ ವೈಯುಕ್ತಿಕ ದ್ವೇಷವಿಲ್ಲವೆಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರಕ್ಕೆ ಸಿದ್ದರಾಮಯ್ಯ ಕೊಟ್ಟ ಕೊಡುಗೆಗಳು ನಮ್ಮ ಕಣ್ಣ ಮುಂದಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 8 ತಿಂಗಳಾಗಿದೆ. 1500 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಮೈಸೂರು ಕೊಡಗು ಕ್ಷೇತ್ರದ ಜನತೆಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ. ಇಷ್ಟೆಲ್ಲ ಅಭಿವೃದ್ಧಿ ಮಾಡಿದ್ದರು ಭಾವನಾತ್ಮಕ ವಿಚಾರದಿಂದ ನಮಗೆ ಸೋಲಾಗುತ್ತಿದೆ ಎಂದಿದ್ದಾರೆ. ಏರ್ ಪೋರ್ಟ್ ವಿಸ್ತರಣೆ ಬಗ್ಗೆ ಸುಮ್ಮನೆ ಹೇಳ್ತಾನೆ ಇದ್ದಾರೆ. ಎಷ್ಟು ವಿಮಾನಗಳು ಓಡಾಟ ಮಾಡುತ್ತಿವೆ ಎಂದು ನೀವೇ ನೋಡಿ. ನಿಮ್ಮ ಸೇವೆ ಮಾಡಲಿಕ್ಕೆ ನನಗೊಂದು ಅವಕಾಶ ಕೊಡಿ ಎಂದು ಸುದ್ದಿಗೋಷ್ಠಿಯಲ್ಲಿ ಭಾವನಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.