ಮೈಸೂರು: ಪ್ರತಾಪ್ ಸಿಂಹ 10 ವರ್ಷ ಸಂಸದರಾಗಿದ್ದರು. ಅವರಿಗೇ ಟಿಕೆಟ್ ಸಿಗುತ್ತೆ ಅಂತ ನಾನೂ ಅಂದುಕೊಂಡಿದ್ದೆ. ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧೆ ಮಾಡಬೇಕು ಅಂತ ಪಟ್ಟು ಹಿಡಿದು ಟಿಕೆಟ್ ತೆಗೆದುಕೊಂಡು ಬಂದೆ. ಆದ್ರೆ ಪ್ರತಾಪ್ ಸಿಂಹ ಅವರಿಗೆ ಅವರೇ ಔಟ್ ಆಗಿಬಿಟ್ರು ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವ್ಯಂಗ್ಯವಾಡಿದ್ದಾರೆ. ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದು ಯಾಕೆ ? ಕಾರಣ ಏನು ಅಂತ ಬಿಜೆಪಿಯವರು ಹೇಳಬೇಕು. ಪ್ರತಾಪ್ ಸಿಂಹ ವಿರುದ್ಧ ಆಡಿಯೋ, ವಿಡಿಯೋ ಇತ್ತ ? ಏನಾದರೂ ದಾಖಲೆಗಳಿದ್ದವೇ ಅಥವಾ ವರಿಷ್ಠರು ಕರೆದು ಹೇಳಿದ್ರ ? ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಲು ಕಾರಣ ಏನು ಅಂತ ಇನ್ನೂ ಗೊತ್ತಾಗಿಲ್ಲ ಎಂದು ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿಗೆ ಕಾರಣ ಕೇಳಿದರು.