ಶಿವಮೊಗ್ಗ: ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಈಗಾಗಲೇ ನಗರವನ್ನು ಸಜ್ಜುಗೊಳಿಸಲಾಗಿದೆ. ಅಲ್ಲಮಪ್ರಭು ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿನರೇಂದ್ರ ಮೋದಿ ಅವರು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ತೆಲಂಗಾಣದಲ್ಲಿ ಪ್ರಚಾರ ಸಭೆಯನ್ನು ಮುಗಿಸಿ ವಿಶೇಷ ವಿಮಾನದಲ್ಲಿ ಮಧ್ಯಾಹ್ನ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇನ್ನು ಸಮಾರಂಭದಲ್ಲಿ 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ.