ಮೈಸೂರು: ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಅಡ್ಡಿ ವಿಚಾರ ಘಟನೆಯನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅಸ್ಸಾಂ ಸರ್ಕಾರ ಮತ್ತು ಕೇಂದ್ರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸಿ.ಎನ್. ಬಸವೇಗೌಡ, ಆರ್. ಮೂರ್ತಿ, ಸುಶ್ರುತ್ ಗೌಡ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.