ರಾಯಚೂರು, ಜ.24: ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ಹೊರಹಾಕಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ ಕಟ್ಟಡಗಳ ಕೋಟ್ಯಂತರ ರೂಪಾಯಿ ಬಾಡಿಗೆಯನ್ನು ಬಿಡುಗಡೆ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.