ಬೆಂಗಳೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಸಭಾ ಸದಸ್ಯ ಲೆಹರ್ಸಿಂಗ್ ಸಿರೋಯಾ ಅವರ ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಇತ್ತೀಚೆಗೆ ಉತ್ತರ ನೀಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಪ್ರಾಯೋಗಿಕವಾಗಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.