ಮೈಸೂರು: ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೈಸೂರು ಜಿಲ್ಲಾಡಳಿತದಿಂದ ಚುನಾವಣಾ ರಾಯಭಾರಿಗಳ ಆಯ್ಕೆ ಮಾಡಲಾಗಿದೆ. ಮಾಡೆಲಿಂಗ್ ಕ್ಷೇತ್ರದ ತನಿಷ್ಕಾ ಮತ್ತು ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ ಹಾಗೂ ಕೆ.ಸೇನಾನಿ ಅವರನ್ನು ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾಡಳಿತದಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ರಾಯಭಾರಿಗಳು ಪಾಲ್ಗೊಂಡು ಮತದಾರರರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲಿದ್ದಾರೆ.