ಕೋಟ್ಯಾಂತರ ರಾಮಭಕ್ತರ ಕನಸು ಇಂದು ನನಸಾಗುತ್ತಿದ್ದುಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರೋ ಭವ್ಯ ರಾಮಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ.ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಎಲ್ಲ ಸಿದ್ಧತೆಗಳು ನಡೆದಿವೆ. ಅಯೋಧ್ಯಾ ನಗರವು ಸಂಪೂರ್ಣವಾಗಿ ಅಲಂಕರಿಸಲ್ಪಟ್ಟಿದ್ದು ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಜನಪ್ರಿಯ ಕ್ರಿಕೆಟಿಗರು, ಕೈಗಾರಿಕೋದ್ಯಮಿಗಳು, ಸಂತರು, ಸೆಲೆಬ್ರಿಟಿಗಳು ಮತ್ತು ವಿವಿಧ ದೇಶಗಳ ಪ್ರತಿನಿಧಿಗಳನ್ನು ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದ್ದು, ಅಯೋಧ್ಯೆಗೆ ರಾಮಭಕ್ತರು ಜಮಾಯಿಸಿದ್ದಾರೆ.