ಅನಧಿಕೃತವಾಗಿ ಮಗುವನ್ನು ಮನೆಯಲ್ಲಿ ಇಟ್ಟಿಕೊಂಡು ಆರೋಪ ಹಿನ್ನೆಲೆ ಬ್ಯಾಡರ ಹಳ್ಳಿ ಪೊಲೀಸರಿಂದ ಬಿಗ್ಬಾಸ್ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅವರನ್ನು ಬಂಧಿಸಲಾಗಿದೆ. ಮಕ್ಕಳ ರಕ್ಷಣಾ ಕಚೇರಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಸೋನು ಶ್ರೀನಿವಾಸ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಸೋನು ಗೌಡ ಟ್ರೋಲ್ ಆಗಿದ್ದರು. ಹೀಗಾಗಿ ಮಕ್ಕಳ ಹಕ್ಕು ಕಸಿದಿರುವ ಅರೋಪದ ಮೇಲೆ ಅರೆಸ್ಟ್ ಮಾಡಲಾಗಿದೆ. ಉತ್ತರ ಕರ್ನಾಟಕದ 8 ವರ್ಷದ ಮಗುವನ್ನು ಸೋನು ದತ್ತು ಪಡೆದುಕೊಂಡಿದ್ದೇನೆ ಎಂದು ಹೇಳಿದ್ದರು. ಸಿಂಪತಿ ಕಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಮುಂದಾಗಿದ್ದರು ಎಂಬ ಆರೋಪ ಈಗ ಸೋನು ಮೇಲಿದೆ. ಮಗುವನ್ನ ದತ್ತು ಪಡೆದು ಸುಳ್ಳು ಪ್ರಚಾರ ಗಿಟ್ಟಿಸಿಕೊಳ್ಳಲು ತಂತ್ರ ಹೆಣೆದಿದ್ದರು ಎಂದು ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಹಿನ್ನೆಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ. ಗುರುವಾರ ರಾತ್ರಿ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ಶುಕ್ರವಾರ ಸೋನುವನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರ ವಶದಲ್ಲಿರುವ ಸೋನುವನ್ನು CWC ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಮಗುವನ್ನು ದತ್ತು ಪಡೆದಿರುವುದರ ಅಧಿಕಾರಿಗಳು ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ. ನಾನು ಮಗು ಕರೆದುಕೊಂಡು ಬಂದು 15 ದಿನ ಆಗಿದೆ . ಈ ರೀತಿ ಆಗತ್ತೆ ಅಂತ ನನಗೆ ಗೊತ್ತಿಲ್ಲ. ನಾನು ಪ್ರೊಸಿಜರ್ ಮೂಲಕವೇ ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಸೋನು ಹೇಳಿದ್ದಾರೆ.