ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಂಡ್ಯ, ಹಾವೇರಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾಸನ, ವಿಜಯಪುರ, ತುಮಕೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಈ ಪೈಕಿ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವೆಂಕಟರಾಮೇಗೌಡ ಅಲಿಯಾಸ್ ಸ್ಟಾರ್ ಚಂದ್ರು ಗೆ ಸಿಕ್ಕಿದೆ. ಇನ್ನು ಮೈತ್ರಿ ಪಕ್ಷಗಳಾದ ಜೆಡಿಎಸ್-ಬಿಜೆಪಿ ನಡುವೆ ಮಂಡ್ಯ ಕ್ಷೇತ್ರಕ್ಕೆ ಪೈಪೋಟಿ ನಡೆದಿದೆ. ಮೂಲಗಳ ಪ್ರಕಾರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಕೊಂಡಿದೆ ಎನ್ನಲಾಗಿದೆ. ಆದ್ರೆ, ಜೆಡಿಎಸ್ನಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿಸಿದೆ.