ಮೈಸೂರು : ಮೈಸೂರು ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಕಾರಾಗೃಹದಲ್ಲಿ ಹಲವು ಬಗೆಯ ಅನಧಿಕೃತ ವಸ್ತುಗಳ ಪತ್ತೆಯಾಗಿದೆ. ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಜೈಲಿನಲ್ಲಿ ಸಿಮ್ ಕಾರ್ಡ್, ನಗದು, ಬ್ಲೇಡ್ ಹಾಗೂ ಚಾಕು ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ ಸೇರಿ ಇತರ ಅಧಿಕಾರಿಗಳು ಭಾಗಿಯಾಗಿದ್ದರು.