ನವದೆಹಲಿ : ಈ ಬಾರಿ ಮಂಡ್ಯ ರಾಜಕಾರಣ ಮತ್ತೆ ರಂಗೇರಿದ್ದು, ದೆಹಲಿ ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆದಿದೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುಲು ಸುಮಲತಾ ಅಂಬರೀಶ್ ಕನಸು ಕಾಣುತ್ತಿದ್ದು, ಟಿಕೆಟ್ಗಾಗಿ ಕಸರತ್ತು ನಡೆಸಿದ್ದಾರೆ. ಗುರುವಾರ ಅಷ್ಟೇ ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ ಹಾಗೂ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಟಿಕೆಟ್ಗಾಗಿ ಮನವಿ ಮಾಡಿದ್ದರು. ಈಗ ಮತ್ತೊಂದೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಹೇಳಿದ್ದಾರಂತೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಸಂತಸಗೊಂಡಿದ್ದು, ಈ ಬಾರಿ ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ.