ಮೈಸೂರು: ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಲು ಸಚಿವ ಮಧು ಬಂಗಾರಪ್ಪ ನಿರಾಕರಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಮಧು ಬಂಗಾರಪ್ಪ, ನಾನು ಆ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ನನ್ನಿಂದ ಯಾವ ಉತ್ತರ ನಿರೀಕ್ಷೆ ಮಾಡಬೇಡಿ. ಅದೇ ನನ್ನ ಉತ್ತರ. ಬೇರೆ ಯಾರಾದರೂ ಬಗ್ಗೆ ಕೇಳಿ ಹೇಳುತ್ತೇನೆ ಎಂದು ಪ್ರತಿಕ್ರಿಯೆ ನೀಡಿದರು.