ಆಹಾರಸುರಕ್ಷತಾಧಿಕಾರಿ ಕೆ.ವಿನಯ್ ಮಾಹಿತಿ
ಪ್ರತಿನಿಧಿ ವರದಿ ಹೊಳೆನರಸೀಪುರ
ಪಟ್ಟಣದ ವಿವಿಧ ಸ್ಥಳಗಳಲ್ಲಿ ಮಾರಾಟ ಮಾಡುವ ಮಾಂಸ ಹಾಗೂ ಕೋಳಿ ಅಂಗಡಿಗಳಿಗೆ ಭೇಟಿ ನೀಡಿ ಮಾಂಸ ಹಾಗೂ ಕೋಳಿ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಶಾಲೆಗೆ ಕಳಿಸಲಾಗುತ್ತಿದೆ ಎಂದು ತಾಲೂಕು ಆಹಾರ ಮತ್ತು ಗುಣಮಟ್ಟ ಸುರಕ್ಷತಾಧಿಕಾರಿ ಕೆ.ವಿನಯ್ ತಿಳಿಸಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜರುಗಿಸಿರುವ ಕ್ರಮಗಳ ಕುರಿತು ಆ.28 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ನಡೆಸಲಾಗಿದ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯಾದ್ಯಂತ ಮಾಂಸ ಮತ್ತು ಮೊಟ್ಟೆಗಳ ಗುಣಮಟ್ಟವನ್ನು ಪರಿಶೀಲಿಸಿರುವ ಸಂಬಂಧ ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಾದ್ಯಂತ ಪಟ್ಟಣದಲ್ಲಿ ಕುರಿ, ಮೇಕೆ, ಕೋಳಿ ಮಾಂಸಗಳ ಅಂಗಡಿಗಳಿಗೆ ಭೇಟಿ ನೀಡಿ ಮಾದರಿ ಸಂಗ್ರಹಿಸಲಾಗುತ್ತಿದೆ. ಅದರಂತೆ ಪಟ್ಟಣದಲ್ಲಿಯೂ ಮಾದರಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸುತ್ತಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಪರವಾನಗಿ ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.