ಮೈಸೂರು ಜ 27: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪಿಸಲಾಗಿದೆ. ಈ ಬಾಲರಾಮನ ಮೂರ್ತಿ ಮೂಡಿ ಬಂದಿರುವ ಕೃಷ್ಣ ಶಿಲೆಗೆ ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು 80 ಸಾವಿರ ರೂ. ದಂಡ ವಿಧಸಿದ್ದರು. ಈ ದಂಡವನ್ನು ಗುತ್ತಿಗೆದಾರ ಶ್ರೀನಿವಾಸ್ ನಟರಾಜ್ ಪಾವತಿಸಿದ್ದರು. ಇದೀಗ ಶ್ರೀನಿವಾಸ್ ನಟರಾಜ್ ಪಾವತಿಸಿದ ದಂಡದ ಮೊತ್ತವನ್ನು 80,000 ರೂ. ಅನ್ನು ಬಿಜೆಪಿ ನೀಡಲಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.