ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸಲಿರುವ ಮತ್ತೆರಡು ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಹೊಚ್ಚ ಹೊಸ ಮಾದರಿಯ ಒಂದು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ವರ್ಚುವಲ್ ಆಗಿ ಶನಿವಾರ ಚಾಲನೆ ನೀಡಲಿದ್ದಾರೆ.
ಹೊಸ ವಂದೇ ಭಾರತ್ ರೈಲುಗಳು ಮಂಗಳೂರು-ಮಡ್ಗಾಂವ್ (ಗೋವಾ) ಹಾಗೂ ಬೆಂಗಳೂರು-ಕೊಯಮತ್ತೂರು ನಡುವೆ, ಅಮೃತ ಭಾರತ್ ರೈಲು ಮಾಲ್ಡಾ-ಬೆಂಗಳೂರು ನಡುವೆ ಸಂಚರಿಸಲಿವೆ.