ಪ್ರತಿನಿಧಿ ವರದಿ ಹಾಸನ
ನೀಟ್ ಪರೀಕ್ಷೆ ಆ.11 ರಂದು ಮಲ್ನಾಡ್ ಇಂಜಿನಿಯರಿಂಗ್ ಕಾಲೇಜು ಮತ್ತು ರಾಜೀವ್ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಸುವ್ಯವಸ್ಥಿತವಾಗಿ ಹಾಗೂ ಲೋಪದೋಷಗಳಿಲ್ಲದೆ ನಡೆಸಲು ಸದರಿ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಅಂಗಡಿ ಮುಚ್ಚುವಂತೆ ಹಾಗೂ ಪರೀಕ್ಷಾರ್ಥಿಗಳು, ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು, ಸಿಬ್ಬಂದಿ ಹೊರತು ಪಡಿಸಿ ಇತರರು ಯಾರೂ ನಿಷೇಧಿತ ಪ್ರದೇಶಕ್ಕೆ ಬರುವಂತಿಲ್ಲ ಎಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಸೆಕ್ಷನ್ 163 ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆದೇಶಿಸಿದ್ದಾರೆ.