ಪ್ರತಿನಿಧಿ ಚರದಿ ರಾಮನಾಥಪುರ
ಪಲ್ಸ್ ಪೋಲಿಯೋ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವುದರಿಂದ ದೇಹದಲ್ಲಿ ಪೋಲಿಯೋ ವೈರಸ್ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ರಾಮನಾಥಪುರ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಹಾಗೂ ಸಾಹಿತಿ ದೇವರಾಜ್ ತಿಳಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ತಾಲೂಕು ಆಡಳಿತ ಆರೋಗ್ಯ ಇಲಾಖೆ, ರಾಮನಾಥಪುರದ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಬಗ್ಗೆ ಬಸವೇಶ್ವರ ವೃತ್ತದಲ್ಲಿ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಂಡ ಮಾತನಾಡಿದರು.
ಮಾ. ೩ ಭಾನುವಾರ ನಿಮ್ಮ ಹತ್ತಿರದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ ಎಲ್ಲರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ ಅವರು ಪೋಲಿಯೋ ರೋಗ ಪೋಲಿಯೋ ವೈರಸ್ ಎಂಬ ರೋಗಾಣುವಿನಿಂದ ಬರುತ್ತದೆ. ಪೋಲಿಯೋ ವೈರಸ್ ಬಾಯಿಯ ಮೂಲಕ ಮಗುವಿನ ದೇಹ ಪ್ರವೇಶಿಸುತ್ತದೆ. ಮಗುವಿನ ಗಂಟಲು ಮತ್ತು ಕರುಳಿನಲ್ಲಿ ಸೇರುತ್ತದೆ. ಆದ್ದರಿಂದ ಪಲ್ಸ್ ಪೋಲಿಯೋ ಲಸಿಕೆಯನ್ನು ಮುಗುವಿಗೆ ಹಾಕುವುದರಿಂದ ದೇಹದಲ್ಲಿ ಪೋಲಿಯೋ ವೈರಸ್ ವಿರುದ್ಧ ರೋಗ ನಿರೋಧಕ ಶಕ್ತಿ ಬರುತ್ತದೆ. 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಕೊಡಿಸುವುದರಿಂದ ಪೋಲಿಯೋ ರೋಗ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದರು.