ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಕರ್ನಾಟಕದ 25ಕ್ಕೂ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 25ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.