ತುಮಕೂರು : ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸದಿದ್ದರೆ ನಾನು ಯಾರಿಗೂ ಮುಖ ತೋರಿಸುವುದಿಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಇಲಾಖೆ ಸಚಿವ ಕೆಎನ್ ರಾಜಣ್ಣ ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಕುಟುಂಬಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ.
ತುಮಕೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರು ಯಾವತ್ತೂ ಕೂಡ ಜಾತ್ಯತೀತರಲ್ಲ. ಮೋದಿ ಗೆದ್ದರೆ ನಾನು ದೇಶ ಬಿಡುತ್ತೇನೆ ಅಂತಾ ಹೇಳಿದ್ದರು, ಈಗ ಏನ್ ಮಾಡಿದರು? ಈಗ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಎರಡು ಕಡೆ ಮೊಮ್ಮಕ್ಕಳು, ಒಂದು ಕಡೆ ಅಳಿಯ ನಿಲ್ಲುತ್ತಿದ್ದಾರೆ. ಹಾಗಿದ್ದರೆ ಜೆಡಿಎಸ್ನಲ್ಲಿ ಬೇರೆ ಯಾರು ಅಭ್ಯರ್ಥಿಗಳು ಇಲ್ಲವೇ ಎಂದು ಪ್ರಶ್ನಿಸಿದರು.