ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾಗಿ ರಮೇಶ್ ಬಂಡಿಸಿದ್ದೇಗೌಡ ಅಧಿಕಾರ ಸ್ವೀಕರಿಸಿದ್ದಾರೆ. ಮೈಸೂರಿನ ವಿಜಯನಗರದಲ್ಲಿನ ಸೆಸ್ಕ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದು, ನೂತನ ಸೆಸ್ಕ್ ನಿಗಮ ನಿಯಮಿತ ಅಧ್ಯಕ್ಷರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಶುಭ ಕೋರಿದರು. ಈ ಸಂದರ್ಭ ಶಾಸಕ ಕೆ. ಹರೀಶ್ ಗೌಡ ಸೇರಿದಂತೆ ಸೆಸ್ಕ್ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.