ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮತ್ತು ಗುಪ್ತಚರ ಇಲಾಖೆಗೆ ದೊರೆತ ಸುಳಿವಿನ ಆಧಾರದಲ್ಲಿ ಎನ್ಐಎ ತಂಡವು ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಎನ್ಐಎ ಅಧಿಕಾರಿಗಳು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.