ರಿಯಲ್ ಸ್ಟಾರ್ ಸೂಪರ್ ಸ್ಟಾರ್ ಉಪೇಂದ್ರ ಗೆ 56ನೇ ಬರ್ತ್ ಡೇ ಸಂಭ್ರಮ. ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ಬೆಂಗಳೂರಿನ ಕತ್ರಿಗುಪ್ಪೆ ನಿವಾಸಕ್ಕೆ ಆಗಮಿಸಿ ತಮ್ಮ ನೆಚ್ಚಿನ ಸೂಪರ್ ಸ್ಟಾರ್ ಬರ್ತ್ ಡೇ ಸೆಲೆಬ್ರೇಟ್ ಮಾಡ್ತಿದ್ದಾರೆ. ಉಪೇಂದ್ರ ಜತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಉಪ್ಪಿ ಮನೆ ಮುಂದೆ ಜಮಾಯಿಸಿದ್ದು ,ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಉಪ್ಪಿ ಬರ್ತ್ ಡೇ ಪ್ರಯುಕ್ತ ‘UI’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು , ಕುದುರೆ ಮೇಲೆ ಕುಳಿತ ಉಪೇಂದ್ರ ಪೋಸ್ ಅಭಿಮಾನಿಗಳಲ್ಲಿ ಕುತೂಹಲವನ್ನ ಮತ್ತಷ್ಟು ಹೆಚ್ಚಿಸಿದೆ. ಮುಂದಿನ ತಿಂಗಳು ಸಿನಿಮಾ ರಿಲೀಸ್ ಆಗ್ತಿದೆ. ಹಾಗೆಯೇ ಅರ್ಜುನ್ ಜನ್ಯ ನಿರ್ದೇಶನದ 45 ಸಿನಿಮಾದ ಉಪ್ಪಿ ಲುಕ್ ಕೂಡ ರಿವೀಲ್ ಆಗಿದ್ದು, ಉಪೇಂದ್ರ ಖಡಕ್ ಲುಕ್ ಇಂಟರ್ನೆಟ್ ನಲ್ಲಿ ಸಾಕಷ್ಟು ಹಲ್ ಚಲ್ ಸೃಷ್ಟಿಸಿದೆ.