ಪೊನ್ನಂಪೇಟೆ ; ಉತ್ತರ ಪ್ರದೇಶ ಮಾದರಿಯ ಬುಲ್ಡೋಜರ್ ಕಾರ್ಯಾಚರಣೆ ಕರ್ನಾಟಕದಲ್ಲೂ ಬೇಕಿದೆ ಎಂದು ನಾಗಮಂಗಲ ಗಲಭೆ ಪ್ರಕರಣ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೀಡಿರುವ ಹೇಳಿಕೆ ತೀವ್ರ ಖಂಡನೀಯ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷರಾದ ಪಿ.ಎ. ಹನೀಫ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋಮುದಳ್ಳುರಿ ಎಬ್ಬಿಸಲು ಪ್ರೇರೇಪಿಸುವ ಈ ರೀತಿಯ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸುತ್ತದೆ. ಆದ್ದರಿಂದ ಸರಕಾರ ಇದನ್ನು ನಿರ್ಲಕ್ಷಿಸಬಾರದು ಎಂದು ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಫೋಟೋ 16 ಎಂಡಿಕೆ 03 ; ಪಿ.ಎ. ಹನೀಫ್