ಪ್ರತಿನಿಧಿ ವರದಿ ಚಾಮರಾಜನಗರ
ತಾಲೂಕಿನ ದೇವಲಾಪುರದ ಗ್ರಾಮದ ನಿವಾಸಿ ಮಹದೇವಸ್ವಾಮಿ ಎಂಬವರು ಕಾಣೆಯಾಗಿದ್ದು, ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ. 24 ವರ್ಷದ ಮಹದೇವಸ್ವಾಮಿ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದರು.
ಇವರ ಸುಳಿವು ದೊರೆತಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ದೂ.ಸಂ.08226-222383, ಡಿವೈಎಸ್ಪಿ ಚಾಮರಾಜನಗರ ಉಪವಿಭಾಗ ದೂ.ಸಂ.08226-222090, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂ.08226-222092, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಮೊ.ಸಂ.9480804646 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
27ಸಿಎಚ್ಎನ್.7: ಮಹದೇವಸ್ವಾಮಿ (ಚಿತ್ರವಿದೆ)