ಸ್ಯಾಂಡಲ್ವುಡ್ ನಿರ್ಮಾಪಕ ಹಾಗೂ ನಟ ರಾಕ್ಲೈನ್ ವೆಂಕಟೇಶ್(rockline venkatesh) ಅವರ ಸಹೋದರನ ಮನೆ ಕಳ್ಳತನ ಪ್ರಕರಣವನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇದಿಸಿದ್ದು, ಕಳ್ಳತನ ಮಾಡಿದ್ದ ನೇಪಾಳಿ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ರಾಕ್ಲೈನ್ ವೆಂಕಟೇಶ್ ಅವರ ತಮ್ಮ ಭ್ರಮರೇಶ್ ಅವರು ಕುಟುಂಬ ಸಮೇತ ಕಳೆದ ತಿಂಗಳು ಯುರೋಪ್ಗೆ ಪ್ರವಾಸ ಹೋಗಿದ್ದ ವೇಳೆ ಮನೆ ಕಳ್ಳತನವಾಗಿತ್ತು. ಈ ಸಂಬಂಧ ಇದೀಗ ಪೊಲೀಸರು, 7 ಆರೋಪಿಗಳ ತಂಡವನ್ನು ಅರೆಸ್ಟ್ ಮಾಡಿದ್ದು, ಬಂಧಿತರಿಂದ ಸುಮಾರು ಮೂರು ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.