ಅರಸೀಕೆರೆ: ತಾಲೂಕಿನ ಬಾಣಾವರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ೪,೪೦, ೬೫೦ ರೂ. ಬೆಲೆಯ ಬಟ್ಟೆಗಳನ್ನು ಚುನಾವಣೆ ನಿಯೋಜಿತ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಪಡಿಸಿಕೊಂಡರು.
ನಗರದ ಹುಳಿಯಾರು ರಸ್ತೆಯಲ್ಲಿರುವ ಪಿ.ಕೆ.ಕ್ಲಾಸ್ ಸೆಂಟರ್ನಲ್ಲಿ ಯಾವುದೇ ದಾಖಲೆಗಳಿಲ್ಲದ ಸೀರೆಗಳು, ಪ್ಯಾಂಟು, ಶರ್ಟ್ ಗಳನ್ನು ದಾಸ್ತಾನು ಮಾಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ವಶಕ್ಕೆ ಪಡೆದರು. ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a comment