ಮೈಸೂರು:
ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮೈಸೂರಿನ ಕೂರ್ಗಳ್ಳಿಯ ಸರ್ಕಾರಿ ಶಾಲೆಯ ಮಕ್ಕಳು ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಖೋಖೋ ಕ್ರೀಡೆಯ ಬಾಲಕರ ವಿಭಾಗದಲ್ಲಿ ಹಾಗೂ 600 ಮೀಟರ್ ಓಟದ ಸ್ಪರ್ಧೆಯ ಬಾಲಕಿಯರ ವಿಭಾಗದಲ್ಲಿ ಮೊದಲನೇ ಬಹುಮಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರೆ. ಬಾಲಕಿಯರ ಖೋ ಖೋ ತಂಡ ಎರಡನೇ ಬಹುಮಾನ ಪಡೆದಿದ್ದಾರೆ. ತಾಲೂಕು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಶಾಲೆಯ ಶಿಕ್ಷಕರು, ಕೂರ್ಗಳ್ಳಿ ರೇವಣ್ಣ ಅವರು ಅಭಿನಂದಿಸಿದರು.
Leave a comment