ಪ್ರತಿನಿಧಿ ವರದಿ ಕನಕಪುರ
ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಚನ್ನಪಟ್ಟಣ ಮತ್ತು ಮಾಗಡಿ ತಾಲೂಕಿನಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾಗಿ ಕೆಲಸ ನಿರ್ವಹಿಸಲು ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜು.6 ರಂದು ನಡೆಯಲಿದೆ.
ಜಿಲ್ಲೆಯ ಎಲ್ಲ ತಾಲೂಕುಗಳ ಸಾಮಾಜಿಕ ಪರಿಶೋಧನಾ ಘಟಕದ ಸಂಪನ್ಮೂಲ ವ್ಯಕ್ತಿಗಳಾಗಿ ಕೆಲಸ ನಿರ್ವಹಿಸಲು ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು.
ರಾಮನಗರದ ಜಿಪಂ ಸಾಮಾಜಿಕ ಪರಿಶೋಧನಾ ಘಟಕ ರೂಂ ನಂ. 4ರಲ್ಲಿ ಈ ಪ್ರಕ್ರಿಯೆ ನಡೆಯಲಿದೆ.
ಮಾಹಿತಿಗಾಗಿ ಕಮಲ ಮುನಿರಾಜ್ 98450 94980, ಶಿವಮ್ಮ 98448 55692 ಉಮಾ 91053 99055, ನಾಗರಾಜು 86186 20963 ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.