ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಆರೋಗ್ಯ ದಿನೇ-ದಿನೇ ಕ್ಷೀಣಿಸುತ್ತಿದೆ. ವಯೋಸಹಜ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ. ಪುತ್ರ ವಿನೋದ್ ರಾಜ್ ಆರೈಕೆಯಲ್ಲಿ ನೆಲಮಂಗಲದ ಸಮೀಪದ ಸೋಲದೇವನಹಳ್ಳಿಯ ನಿವಾಸದಲ್ಲಿ ಲೀಲಾವತಿ ದಿನಗಳು ಕಳೆಯುತ್ತಿದ್ದಾರೆ. ಹಿರಿಯ ನಟಿಯ ಆರೋಗ್ಯ ಕ್ಷೀಣಿಸುತ್ತಿರುವ ಸುದ್ದಿ ಹಬ್ಬುತ್ತಿದ್ದಂತೆ ಚಿತ್ರರಂಗದ ಹಲವು ನಟರು ಒಬ್ಬೊಬ್ಬರಾಗಿ ಲೀಲಾವತಿಯವರ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.