ಮೈಸೂರು:ವರುಣದಲ್ಲಿ ಭಾವನಾತ್ಮಕವಾಗಿ ಮತ ಕೇಳಿದ ವಿಚಾರ ಅದೇನು ಭಾವನಾತ್ಮಕ ಏನು ಅಲ್ಲ. ಹೆಚ್ಚು ಲೀಡ್ ಬೇಕು ಎಂದು ಸ್ವಕ್ಷೇತ್ರದವರನ್ನ ಕೇಳಿದ್ದೇನೆ ಅಷ್ಟೇ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಬರಿ 9 ಸಾವಿರ ಲೀಡ್ ಬಂದಿತ್ತು.ಈ ಬಾರಿ ಅದನ್ನ 60 ಸಾವಿರ ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಏನು ಇಲ್ಲ. ಅದು ನನ್ನ ಸಹಜವಾದ ಮಾತುಗಳು ಅಷ್ಟೇ. ಬಿಜೆಪಿವರು ಬಂದರೇ ಬಡವರು ಕಾರ್ಯಕ್ರಮಗಳು ನಿಂತು ಹೋಗುತ್ತವೆ. ಹೀಗಾಗಿ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಲು ಹೆಚ್ಚು ಲೀಡ್ ಕೊಡಿ ಎಂದು ಕೇಳಿಕೊಂಡಿದ್ದೇನೆ. ಮೈಸೂರು ಚಾಮರಾಜನಗರ ಮಾತ್ರವಲ್ಲ 28 ಕ್ಷೇತ್ರ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ಮತ್ತೊಂದು ಬಾರಿ ಈ ಕಡೆ ಭಾಗಕ್ಕೆ ಪ್ರವಾಸಕ್ಕೆ ಬರುತ್ತೇನೆ ಎಂದು ಹೇಳಿದರು.