ಜೆಚ್ಡಿ ದೇವೇಗೌಡರ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಡಿದ ಟೀಕೆಗೆ ಸರಣಿ ಟ್ವಿಟ್ ಮಾಡುವ ಮೂಲಕ ಜೆಡಿಎಸ್ (JDS) ಆಕ್ರೋಶ ಹೊರ ಹಾಕಿದೆ. ಸಿದ್ದರಾಮಯ್ಯ ಸೊಕ್ಕಿನ ಮನುಷ್ಯ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಗೌಡರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಕರ್ನಾಟಕದ ಸೊಕ್ಕಿನ ಮನುಷ್ಯ ಎಂದು ಜೆಡಿಎಸ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ.
ಗೌಡರು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇ ಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಸೊಕ್ಕಿನ ಮನುಷ್ಯಕ್ಕೆ ಟ್ಯಾಗ್ ಮಾಡಿ ಟಾಂಗ್ ಕೊಟ್ಟಿದೆ.