ಮೈಸೂರು: ಸಿದ್ದರಾಮಯ್ಯನ ಕಾಲ ವಿಜಯನಗರ ಸಾಮ್ರಾಜ್ಯದ ಆಡಳಿತದಂತಿದೆ, ಒಂದೂವರೆ ಕೋಟಿ ರೂಪಾಯಿ ಬೆಲೆ ಬಾಳುವ ನಿವೇಶನ ಕೇವಲ ಒಂದು ಸಾವಿರಕ್ಕೆ ಸಿಗುತ್ತಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೂ ಇದೇ ರೀತಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತೆತ್ತಿದರೆ ನಾನು ಅಕ್ಕಿ ಕೊಟ್ಟೆ ಎನ್ನುತ್ತಾರೆ ಆದರೆ ದೇವರಾಜ ಅರಸು ಅವರು ಅಕ್ಕಿ ಬೆಳೆಯುವ ಭೂಮಿಯನ್ನೇ ನೀಡಿದ್ದಾರೆ. ಸಿದ್ದರಾಮಯ್ಯನ ಕಾಲ ವಿಜಯನಗರ ಸಾಮ್ರಾಜ್ಯದ ಆಡಳಿತದಂತಿದೆ, ಒಂದೂವರೆ ಕೋಟಿ ರೂಪಾಯಿ ಬೆಲೆ ಬಾಳುವ ನಿವೇಶನ ಕೇವಲ ಒಂದು ಸಾವಿರಕ್ಕೆ ಸಿಗುತ್ತಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೂ ಇದೇ ರೀತಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಎಚ್ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ, ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದರು.
ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಪ್ರತಿಷ್ಠಿತ ಮೂರು ಕ್ಷೇತ್ರಗಳಿಗೆ ಹದಿನೈದು ದಿನಗಳಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮೇಲೆ ಮುಡಾ, ವಾಲ್ಮೀಕಿ ನಿಗಮ ಹಗರಣಗಳ ಕಾರ್ಮೋಡ ಕವಿದಿದೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಮೆಗಾಸಿಟಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ. ಇವರಿಂದ ವಂಚನೆಗೊಳಗಾದ ಕೆಲವರು ಆತ್ಮಹತ್ಯೆ ಕೂಡಾ ಮಾಡಿಕೊಂಡಿದ್ದಾರೆ.
ಹಾಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್ ಗೆ ಪೂರಕ ವಾತಾವರಣವಿದ್ದು, ಜೆಡಿಎಸ್ ಯುವನಾಯಕ ನಿಖಿಲ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶವಾಸ ವ್ಯಕ್ತಪಡಿಸಿದರು.
ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ಬಗ್ಗೆ ಸಚಿವ ಭೈರತಿ ಸುರೇಶ್ ಅತ್ಯಂತ ಕೀಳು ಮಟ್ಟದ ಪದ ಬಳಸಿ ಟೀಕಿಸಿದ್ದಾರೆ. ಶೋಭಾಕರಂದ್ಲಾಜೆ ಒಬ್ಬ ಸುಸಂಸ್ಕೃತ ಹೆಣ್ಣು ಮಗಳು. ಕೇಂದ್ರ, ರಾಜ್ಯದಲ್ಲಿ ಸಚಿವೆಯಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಿದ್ದರಾಮಯ್ಯನ ಇಂತಹ ಚೇಲಾಗಳಿಂದ ರಾಜ್ಯದ ಘನತೆ ಹಾಳಾಗುತ್ತಿದೆ. ರಾಜ್ಯದಲ್ಲಿ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಸಿಎಂ ಬಿಟ್ಟುಬಿಟ್ಟಿದ್ದಾರೆ.
ನನ್ನ ಬಗ್ಗೆಯೂ ಭೈರತಿ ಸುರೇಶ್ ಕೇವಲವಾಗಿ ಮಾತನಾಡಿದ್ದಾನೆ. ಈ ಹಿಂದೆ ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ ಕಾಂಗ್ರೆಸ್ ನ ಹಿರಿಯ ನಾಯಕರನ್ನು ಅತ್ಯಂತ ಕಟುವಾಗಿ ಟೀಕಿಸಿದ್ದಾರೆ. ಆದರೆ ಕಾಂಗ್ರೆಸ್ ಗೆ ಬಂದು ಸಿದ್ದರಾಮಯ್ಯ ಸಿಎಂ ಆದದ್ದು ವಿಪರ್ಯಾಸವಾಗಿದೆ ಹೇಳಿಕೆ ನೀಡಿದ್ದಾರೆ.
ಮುಡಾ ಅಕ್ರಮದ ಪ್ರಕರಣ ಲೋಕಾಯುಕ್ತದಿಂದ ಸರಿಯಾಗಿ ನಡೆಯುತ್ತಿಲ್ಲ, ಲೋಕಾಯುಕ್ತದ ಬಗ್ಗೆ ರಾಜ್ಯದ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಮುಡಾ ಹಗರಣದ ಬಗ್ಗೆ ಸಿಬಿಐ ಹಾಗು ಇಡಿ ಸಮಗ್ರವಾಗಿ ತನಿಖೆ ಮಾಡಬೇಕು. ಲೋಕಾಯುಕ್ತ ತನಿಖೆಯಿಂದ ಸತ್ತಾಂಶ ಹೊರಬರುವುದಿಲ್ಲ ಎಂದು ಎಂಎಲ್ಸಿ., ಎಚ್ ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.