ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಯಾರನ್ನೂ ರಕ್ಷಿಸಲ್ಲ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪಕ್ರರಣಕ್ಕೂ ಸಾಮ್ಯತೆ ಇದೆ. ಈ ಬಗ್ಗೆ ನಮ್ಮ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ ಎಂದರು.
ಬ್ರ್ಯಾಂಡ್ ಬೆಂಗಳೂರು ಹೆಸರು ಹಾಳು ಮಾಡುವ ಪ್ರಯತ್ನ ನಡೆದಿದೆ. ಬೆಂಗಳೂರನ್ನು ಹಾಳು ಮಾಡುವ ಎಲ್ಲ ಕೆಲಸ ಮಾಡುತ್ತಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ ಬಿಜೆಪಿಯವರು ರಾಜಕಾರಣ ಮಾಡುತ್ತೇವೆ ಅಂದರೇ ಮಾಡಿಕೊಳ್ಳಲಿ ಎಂದು ಹೇಳಿದರು.