ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿದೆ. ಇದೀಗ ಚೆಂಡು ನ್ಯಾಯಾಲಯದ ಅಂಗಳದಲ್ಲಿದೆ. ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆಯೋ ನೋಡಬೇಕಿದೆ ಎಂದು ಶಾಸಕ ಜಿ ಟಿ ದೇವೆಗೌಡ ಹೇಳಿದ್ದಾರೆ.
ಇಂದು ಶ್ರಾವಣ ಮಾಸದ ಹುಣ್ಣಿಮೆ ಹಿನ್ನೆಲೆ, ದಕ್ಷಿಣ ಕಾಶಿ ನಂಜನಗೂಡಿನ ದೇಗುಲಕ್ಕೆ ಶಾಸಕ ಜಿ ಟಿ ದೇವೇಗೌಡ ಭೇಟಿ ನೀಡಿದ್ದಾರೆ. ಕುಟುಂಬ ಸಮೇತ ಭೇಟಿ ನೀಡಿ ಶ್ರೀಕಂಠೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಶಾಸಕ ಜಿ ಟಿ ದೇವೇಗೌಡ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಣ್ಣಿಮೆ ಅಂಗವಾಗಿ ನಂಜುಂಡೇಶ್ವರನ ದರ್ಶನ ಪಡೆಯಲು ಆಗಮಿಸಿರುವುದಾಗಿ ಇದೇ ವೇಳೆ ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಅನುಮತಿ ವಿಚಾರವಾಗಿ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿದೆ. ಇದೀಗ ಚೆಂಡು ನ್ಯಾಯಾಲಯದ ಅಂಗಳದಲ್ಲಿದೆ. ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆಯೋ ನೋಡಬೇಕಿದೆ ಎಂದರು. ಅಲ್ಲದೆ ಮುಂಬರುವ ದಿನಗಳಲ್ಲೂ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಲು ನಿರ್ಧರಿಸಲಾಗಿದೆ ಎಂದು ಶಾಸಕ ಜಿ ಟಿ ದೇವೆಗೌಡ ಹೇಳಿದ್ದಾರೆ.
ಈ ವೇಳೆ ಜೆಡಿಎಸ್ ಮುಖಂಡರು ಜಿಟಿಗೆ ಸಾಥ್ ನೀಡಿದರು.