ಹಾಸನ ಲೋಕಸಭಾ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮೆಗಾ ಪ್ಲ್ಯಾನ್ ಮಾಡಲಾಗುತ್ತಿದೆ. ಹಾಗಾಗಿ ಇಂದು ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದ್ದು, ಗದ್ದಲ ಉಂಟಾಗಿದೆ. ಆಸನ ಸಿಕ್ಕಿಲ್ಲವೆಂದು ಕಾಂಗ್ರೆಸ್ ಮುಖಂಡ ಹೆಚ್.ಕೆ.ಮಹೇಶ್ ಬೆಂಬಲಿಗರಿಂದ ಗದ್ದಲ ಮಾಡಲಾಗಿದೆ. ಕಾರ್ಯಕರ್ತರ ವರ್ತನೆಗೆ ಸಚಿವ ಎನ್.ಚಲುವರಾಯಸ್ವಾಮಿ ಬೇಸರ ಉಂಟು ಮಾಡಿದೆ.
ನೀವು ಈ ರೀತಿ ಗಲಾಟೆ ಮಾಡಿದರೆ ನಾನು ಹೊರಟು ಹೋಗುತ್ತೇನೆ. 40 ವರ್ಷದಲ್ಲಿ ಈ ರೀತಿ ಸಭೆ ನೋಡಿಲ್ಲ. ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಸರಿ ಮಾಡಿಕೊಂಡು ಹೋರಾಡೋಣ ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರ ಗೆಲ್ಲಲು 5 ತಿಂಗಳ ಮುಂಚೆಯೇ ಕಾಂಗ್ರೆಸ್ ಚುನಾವಣಾ ತಯಾರಿ ನಡೆಸಿದ್ದು, ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಕಾರ್ಯಕರ್ತರು, ಟಿಕೆಟ್ ಆಕಾಂಕ್ಷಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಕರ್ತರು, ಪ್ರಮುಖರಿಂದ ಮಾಹಿತಿ ಪಡೆಯಲಾಗಿದೆ.
ಅಭಿಪ್ರಾಯ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿಗೆ ಮಾಹಿತಿ ರವಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮತ್ತೊಬ್ಬ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ಹಾಸನ ಲೋಕಸಭಾ ವ್ಯಾಪ್ತಿಯ ಕಾಂಗ್ರೆಸ್ ಶಾಸಕರಾದ ಶಿವಲಿಂಗೇಗೌಡ, ಕಡೂರು ಶಾಸಕ ಆನಂದ್, ಎಂಎಲ್ಸಿ ಮಧು ಮಾದೇಗೌಡ ಭಾಗಿ ಆಗಿದ್ದರು.