ಪ್ರತಿನಿಧಿ ವರದಿ ಚಾಮರಾಜನಗರ
ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿಯ ನೂತನ ಸದಸ್ಯ ಮೈಸೂರು ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ನಗರದ ಜಿಲ್ಲಾಡಳಿತ ಭವನದಲ್ಲಿ ಭೇಟಿ ನೀಡಿ ಸನ್ಮಾನಿಸಲಾಯಿತು.
ಜಿಲ್ಲೆಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ಪೌರಕಾರ್ಮಿಕರು ವಸತಿ ಸೌಕರ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ವಸತಿ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು ಹಾಗೂ ಮ್ಯಾನುವಲ್ ಸ್ಕ್ಯಾವೆಂಜರ್ ಕುಟುಂಬದವರನ್ನು ಗುರುತಿಸಿ ಪುನರ್ವಸತಿ ಕಲ್ಲಿಸಿಕೊಡಬೇಕು ಎಂದು ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಜಿಲ್ಲಾಧಿಕಾರಿಅವರಿಗೆ ಮನವಿ ಮಾಡಿದರು.
ಮನವಿಗೆ ಸ್ಪಂಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್, ಖಂಡಿತವಾಗಿ ಪೌರಕಾರ್ಮಿಕರಿಗೆ, ಮ್ಯಾನುವಲ್ ಸ್ಕ್ಯಾವೆಂಜರ್ ಗಳಿಗೆ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದರು.
ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ನೂತನ ಸದಸ್ಯ ಹೊನ್ನೂರು ಆರ್ಮುಗಂ, ಕುಮಾರ್, ತಂಗಮ್ಮ, ಶಶಿಕಲಾ, ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ಯುವಕರ ಮಹಾಸಂಘದ ಅಧ್ಯಕ್ಷ ಶ್ರೀನಿವಾಸ್, ಸಲಹಾ ಸಮಿತಿ ಅಧ್ಯಕ್ಷ ಸಿ.ಆರ್.ವಿಜಯ, ಎಸ್.ಪಿ.ಮಹದೇವ, ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಸೇರಿದಂತರೆ ಇತರರು ಇದ್ದರು.
4ಸಿಎಚ್ಎನ್.5: : ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ವತಿಯಿಂದ ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.