ದೇವನಹಳ್ಳಿ: ಶೀಘ್ರದಲ್ಲೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದು, ಬುಧವಾರ ನಡೆದ ರಾಜೀನಾಮೆ ಪ್ರಸಂಗದ ಕುರಿತು ಚರ್ಚಿಸಲಿದ್ದೇನೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಮಾಧ್ಯಮದವರ ಪ್ರಶ್ನೆಗೆ ಉದ್ದೇಶಿಸಿ, ನಿನ್ನ ನಡೆದ ಘಟನೆಗಳ ರೂವಾರಿ ಯಾರೆಂದು ಮಾಧ್ಯಮದವರೇ ನನಗೆ ತಿಳಿಸಬೇಕು. ನನಗಂತೂ ದಿಗ್ಬ್ರಮೆಯಾಗಿದೆ. ಕಾಂಗ್ರೆಸ್ನ ಹೈಕಮಾಂಡ್ ನೀಡುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧನಾಗಿ ಕಾರ್ಯನಿರ್ವಹಿಸುತ್ತೇವೆ. ರಾಜೀನಾಮೆಯ ಪ್ರಹಸನ ನನಗೆ ಆಶ್ಚರ್ಯ ಉಂಟುಮಾಡಿದೆ ಎಂದರು.
ನಾನು ಕೇಂದ್ರ ಮಟ್ಟದಲ್ಲಿ ರಾಜಕಾರಣ ಮಾಡಿರುವನಾಯಕ , ಕಾಂಗ್ರೆಸ್ ಪಕ್ಷವು ಕುಟುಂಬದ ಹಲವರಿಗೆ ಟಿಕೆಟ್ ನೀಡಿರುವುದುರಿಂದ ಸಹಜವಾಗಿಯೇ ನಾನೂ ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ದೊರೆಯುವ ಆಶಾಭಾವನೆಯಿಂದಿದ್ದು, ನಾನು ಕೋಲಾರ ಲೋಕಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷರವರಿಗೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಿದ್ದಂತೆ ಈ ಜಗಳ ಹಾಗೂ ಮನಸ್ಥಾಪಗಳನ್ನು ನಮ್ಮ ಹಂತದಲ್ಲಿಯೇ ಬಗೆಹರಿಸಿಕೊಂಡು ಮುನ್ನಡೆಯಬೇಕು. ಅಂತಿಮವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.