ನವದೆಹಲಿ: ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೂ ಕೂಡ ಭಾಗಿಯಾಗೋದಿಲ್ಲ ಎಂದು ತಿಳಿಸಿದೆ. ಈ ಕುರಿತಾಗಿ ಬುಧವಾರ ಅಧಿಕೃತವಾಗಿ ತಿಳಿಸಿದೆ. ಇದನ್ನು ಬಿಜೆಪಿ ಹಾಗೂ ಆರ್ಎಸ್ಎಸ್ ತನ್ನ ಕಾರ್ಯಕ್ರಮ ಎಂದು ಬಿಂಬಿಸಿದೆ. ಆದರೆ, ಧರ್ಮ ಎನ್ನುವುದು ವೈಯಕ್ತಿಕ ಎಂದು ಕಾಂಗ್ರೆಸ್ ತನ್ನ ನಿಲುವು ತಿಳಿಸಿದೆ.ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಅಧೀರ್ ರಂಜನ್ ಚೌಧರಿ ಅವರು ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ ಎಂದು ಕಾಂಗ್ರೆಸ್ ಬುಧವಾರ ಅಧಿಕೃತವಾಗಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ವ್ಯತಿರಿಕ್ತ ಹೇಳಿಕೆಗಳು ಬಂದ ಕಾರಣಕ್ಕೆ, ರಾಮಮಂದಿರ ಉದ್ಘಾಟನೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಪಾಲ್ಗೊಳ್ಳುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಅನುಮಾನಗಳಿದ್ದವು. ಆದರೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಸಂಪೂರ್ಣವಾಗಿ ಆರ್ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕ್ರಮವಾಗಿ ಕಾಣುತ್ತಿರುವುದರಿಂದ ಇದರಲ್ಲಿ ಭಾಗಿಯಾಗೋದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಯಾಕೆ ಹೋಗ್ತಿಲ್ಲ: ಇಲ್ಲಿದೆ ಮೂರು ಕಾರಣ
* ಆರೆಸ್ಸೆಸ್/ಬಿಜೆಪಿ ರಾಮಮಂದಿರವನ್ನು ರಾಜಕೀಯ ಯೋಜನೆ ಇರಿಸಿ ಮಾಡಿದೆ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
* ದೇವಾಲಯವು ಪೂರ್ಣವಾಗಿಲ್ಲ. ಅಪೂರ್ಣ ಮಂದಿರದ ಉದ್ಘಾಟನೆಗೆ ಹೋಗೋದಿಲ್ಲ.
* ಚುನಾವಣಾ ಲಾಭಕ್ಕಾಗಿ ರಾಮ ಮಂದಿರ ಉದ್ಘಾಟನೆಯನ್ನು ಮುಂದಿಡಲಾಗಿದೆ. ಪಕ್ಷ ಮತ್ತು ಪಕ್ಷದ ನಾಯಕರು 2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿರುತ್ತಾರೆ ಎಂದು ತಿಳಿಸಿದೆ.