ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಪಕ್ಷಗಳು ಸಾಕಷ್ಟು ಕಸರತ್ತು ಮಾಡುತ್ತಿವೆ. ಯಾವ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇದೆಲ್ಲದರ ಮಧ್ಯೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
5 ಐಎಎಸ್ ಅಧಿಕಾರಿಗಳ ವರ್ಗಾವಣೆ
- ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ
- ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್
- ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ
- ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ
- ಭರತ್ ಎಸ್: ಸಿಇಒ, ಜಿ.ಪಂ. ಗದಗ ವರ್ಗಾವಣೆ ಮಾಡಲಾಗಿದೆ.