ಮೈಸೂರು: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಆಸ್ತಿ ಘೋಷಣೆಯನ್ನು ಮಾಡಿದ್ದಾರೆ. ಯದುವೀರ್ ಒಡೆಯರ್ ಬಳಿ ಚರಾಸ್ತಿ 4 ಕೋಟಿ 99 ಲಕ್ಷದ 59 ಸಾವಿರದ 303 ಇದ್ದು, ಯಾವುದೇ ಚಿರಾಸ್ತಿಯನ್ನ ಹೊಂದಿಲ್ಲ.
ಯದುವೀರ್ ಒಡೆಯರ್ ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದ್ದು, ಸದ್ಯ ಅವರ ಬಳಿ ಕೈಯಲ್ಲಿ ಒಂದು ಲಕ್ಷ ರೂಪಾಯಿ ನಗದು ಇದೆ. ಇನ್ನು ಯದುವೀರ್ ಒಡೆಯರ್ ಅವರ 2 ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ಹಣ ಇದೆ. ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರ್ ಹೊಂದಿದ್ದಾರೆ. ಇನ್ನು 4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಇದೆ ಎಂದು ನಾಮಪತ್ರ ಅಫಿಡೆವಿಟ್ನಲ್ಲಿ ಘೋಷಿಸಿಕೊಂಡಿದ್ದಾರೆ.
ಇನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಹಾರಾಜ ಆಗಿದ್ದರೂ ಸಹ ಅವರು ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಹೊಂದಿಲ್ಲ. ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್ನಿಂದ ಸಾಲ ಸಹ ಪಡೆದಿಲ್ಲ. ಹಾಗೇ ಯಾವುದೇ ರೀತಿಯ ಆದಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಇನ್ನು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಯಾವ ಪ್ರಕರಣ ದಾಖಲಾಗಿಲ್ಲ ಎಂದು ಯದುವೀರ್ ಅಫಿಡವಿಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.