ಶಿವಮೊಗ್ಗ: ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದಿರುವ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಕೆಎಸ್ ಈಶ್ವರಪ್ಪ ಟ್ವೀಟ್ ಮಾಡಿದ್ದು, ಮತ್ತೆ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಗುಡುಗಿದ್ದಾರೆ. ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಘೋಷಿಸಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟವಾಗಿ ಬರೆದುಕೊಂಡಿದ್ದಾರೆ.
ಅಲ್ಲದೇ ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಟ್ವೀಟ್ ಮಾಡಿದ್ದಾರೆ.