ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಯೋಗದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಜೂ.21 ರಂದು ಬೆಳಗ್ಗೆ 7 ಗಂಟೆಗೆ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ (ಹಾಕಿ ಮೈದಾನ)ದಲ್ಲಿ ಆಯೋಜಿಸಲಾಗಿದೆ.
ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಎಚ್.ಡಿ.ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತಿಯನ್ನು ವಹಿಸುವರು.
ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರ ಸಂಸದ ಶ್ರೇಯಸ್ ಎಂ.ಪಟೇಲ್, ವಿಧಾನಸಭೆ ಶಾಸಕರಾದ ಎಚ್.ಡಿ.ರೇವಣ್ಣ, ಡಾ.ಸಿ.ಎನ್.ಬಾಲಕೃಷ್ಣ, ಎ.ಮಂಜು, ಎಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನಪರಿಷತ್ ಶಾಸಕರಾದ ಡಾ.ಸೂರಜ್ ರೇವಣ್ಣ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.