ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇಂದು(ಜು.20) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 9:30ಕ್ಕೆ ನಾಗಮಂಗಲದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಪ್ರಾಂಗಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10ಗಂಟೆಗೆ ನಾಗಮಂಗಲದ ತಾಲೂಕು ಕಚೇರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಭೆಯಲ್ಲಿ ಪಾಲ್ಗೊಂಡು, ಮದ್ಯಾಹ್ನ 12 ಗಂಟೆಗೆ ನಾಗಮಂಗಲ ತಾಲೂಕಿನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಸಂಜೆ 4 ಗಂಟೆಗೆ ದೊಡ್ಡ ಉಪ್ಪಳ ಗ್ರಾಮದ ಹೇಮಾವತಿ ನಾಲಾ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆ ನೆರವೆರಿಸಿ, ಸಂಜೆ 4:30 ಗಂಟೆಗೆ ಚಿಕ್ಕ ಜಟಕಾ ಗ್ರಾಮದ ಹೇಮಾವತಿ ನಾಲಾ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 5 ಗಂಟೆಗೆ ಸೀಗೆಹಳ್ಳಿ ಗ್ರಾಮದ ಹೇಮಾವತಿ ನಾಲಾ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆಯಲ್ಲಿ ಪಾಲ್ಗೊಂಡು, ಸಂಜೆ 6 ಗಂಟೆಗೆ ನಾಗಮಂಗಲದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾತ್ರಿ 8 ಗಂಟೆಗೆ ರಸ್ತೆ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.